ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ರೋಟರಿ ಕ್ಲಬ್ ಹೊಳಲ್ಕೆರೆ, ಇನ್ನರ್ ವ್ಹೀಲ್ ಕ್ಲಬ್ ಮತ್ತು ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್- 7ರಂದು ಭಾನುವಾರ ಹೊಳಲ್ಕೆರೆ ರೋಟರಿ ಬಾಲಭವನ ಆವರಣದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ರಂಗಾಪುರ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಯೋಗ ಗುರು ತಿಪ್ಪಾರೆಡ್ಡಿ ಶಿಬಿರ ಉದ್ಘಾಟಿಸುವರು. ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಹಾಗೂ ನಿರ್ದೇಶಕ ಡಾ.ರಾಜೇಶ್ ಪಾದೇಕಲ್ ಅತಿಥಿಗಳಾಗಿ ಆಗಮಿಸುವರು.
ಹೊಳಲ್ಕೆರೆ ರೋಟರಿ ಕ್ಲಬ್ ಅಧ್ಯಕ್ಷ ರಾಜಪ್ಪ ಎಸ್ ಅಧ್ಯಕ್ಷತೆ ವಹಿಸುವರು. ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿದ್ದು, ನುರಿತ ತಜ್ಞ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯರು ಶಿಬಿರದಲ್ಲಿ ಭಾಗವಹಿಸುವರು.
ವಿವರಗಳಿಗೆ ಮೊಬೈಲ್: 0449177677, 9886413663 ಸಂಪರ್ಕಿಸಬಹುದು.

