ಸಿಎಂ ಮತ್ತು ಡಿಸಿಎಂ ಅವರಿಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಿಸ್ಟರ್ ಛಲವಾದಿ ನಾರಾಯಣಸ್ವಾಮಿ,
ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಎಂದು ದಾಖಲೆ ಸಮೇತ ಡಿಸಿಎಂ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ!.

- Advertisement - 

ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..?

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ.

- Advertisement - 

 

 

Share This Article
error: Content is protected !!
";