ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ಡಿಸೆಂಬರ್ 07ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಚಿತ್ರದುರ್ಗ ನಗರದ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಭಾರತೀಯ ನಾಗರೀಕ ಸುರಕ್ಷ ಸಂಹಿತೆ-2023ರ ಕಲಂ 163ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಸಿ.ಇ.ಟಿ ಕೋಚಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಇದೇ ಡಿ.07ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರೆಗೆ ಮುಚ್ಚುವಂತೆ ಮತ್ತು
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಯು ಯಾವುದೇ ಕಾರಣಕ್ಕೂ ವೈರ್‍ಲೆಸ್, ಕ್ಯಾಲುಕಲೇಟರ್, ಲಾಗ್‍ಟೇಬಲ್ಸ್, ಮೊಬೈಲ್ ಫೋನ್‍ಗಳನ್ನು ಮತ್ತಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

