ಚಂದ್ರವಳ್ಳಿ ನ್ಯೂಸ್, ಪಾವಗಡ:
ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್ಹೆಚ್.ಎಸ್. ಅವರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಧ್ಯಕ್ಷ ಆಂಜಿನಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ತಾಲೂಕ್ಅಧ್ಯಕ್ಷ ಈರಣ್ಣ, ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷ ವಿಜಯ್ ಕುಮಾರ್,
ರಾಜ್ಯ ಉಪಾಧ್ಯಕ್ಷ ಪುನೀತ್, ಮಂಜುನಾಥ್, ರಾಜ್ಯ ಪ್ರಧಾನಕಾರ್ಯದರ್ಶಿ ಹರ್ಷ, ರಾಜ್ಯ ಕಾರ್ಯದರ್ಶಿ ಸುಮಂತ್ ಸೇರಿದಂತೆ ಹಲವು ಯುವ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

