ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಹೂಡಿಕೆಗಳನ್ನು ಉತ್ತೇಜಿಸಿ, ಉದ್ಯೋಗ ಸೃಷ್ಟಿಗೆ ನೆರವಾಗುವ ಕ್ರಮಗಳನ್ನು ಜಾರಿಗೆ ತರುವ ದಿಸೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಕ್ರಿಯೆ ನಿರಂತರವಾಗಿ ಮುಂದುವರೆದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಲಾಯಿತು. ಹಲವು ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆದು,
ಕೈಗಾರಿಕಾ ವಲಯಕ್ಕೆ ಹೊಸ ಬಲ ತುಂಬುವ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಸಚಿವ ಪಾಟೀಲ್ ತಿಳಿಸಿದರು. ಸಭೆಯಲ್ಲಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

