ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಹಾಸನ:
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು
, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್  ಹಾಸನ ವತಿಯಿಂದ ಆಯೋಜಿಸಲಾದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

- Advertisement - 

ಇಂದು ಸುಮಾರು 298 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಾಗಿದೆ. ಹಾಸನ ಜಿಲ್ಲೆಯ ರಾಜಕೀಯ ಚಿತ್ರಣ ಮತ್ತು ಇಲ್ಲಿನ ಸಮಸ್ಯೆಗಳ ಬಗ್ಗೆ ಸ್ಪಷ್ಟವಾದ ಅರಿವಿದೆ. ಈ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಿದೆ.

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ 492 ಭರವಸೆಗಳನ್ನು ನೀಡಿದ್ದು, ಅದರಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದಲ್ಲಿ 242 ಭರವಸೆಗಳನ್ನು ಈಡೇರಿಸಲಾಗಿದೆ. 2013 ರಿಂದ 2018 ರವರೆಗೆ ಹಾಗೂ 2023 ರಿಂದ ಇಲ್ಲಿಯವರೆಗಿನ ನಮ್ಮ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. 2013-2018ರಲ್ಲಿ ನೀಡಲಾಗಿದ್ದ 162 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. 

- Advertisement - 

2023 ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ  ತಕ್ಷ ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರಲು ಪ್ರಯತ್ನಿಸಲಾಯಿತು. ಈ ಪ್ರಯತ್ನದ ಫಲವಾಗಿ ಜೂನ್ ತಿಂಗಳಲ್ಲಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದುವರೆಗೂ ಸುಮಾರು 600 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಬಸ್ ಸೇವೆ ಪಡೆದಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕರು, ಸಂಸದರು ಅಧಿಕಾರಿಗಳು ಹಾಜರಿದ್ದರು.

 

Share This Article
error: Content is protected !!
";