ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಂಜಾಬ್ ನಂತಹ ಸಣ್ಣ ರಾಜ್ಯದಲ್ಲೇ ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಹೈಕಮಾಂಡ್ 500 ಕೋಟಿ ನಿಗದಿ ಮಾಡಿದ್ದರೆ ಕರ್ನಾಟದಂತಹ ಸಂಪದ್ಭರಿತ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಕುರ್ಚಿಗೆ ಎಷ್ಟು ರೇಟ್ ಫಿಕ್ಸ್ ಮಾಡಿರಬಹುದು? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ನಾಯಕತ್ವ ಬದಲಾವಣೆ ವಿಷಯ ಕುರಿತು ನಮ್ಮ ಐದಾರು ಜನರ ನಡುವಿನ ಗುಟ್ಟಿನ “ವ್ಯಾಪಾರ” ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದು ಬಹುಶಃ ಇದಕ್ಕೇ ಇರಬೇಕು ಎಂದು ಅಶೋಕ್ ಟಾಂಗ್ ನೀಡಿದ್ದಾರೆ.
ಒಟ್ಟಿನಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕವನ್ನ ಎಟಿಎಂ ಸರ್ಕಾರ ಮಾಡಿಕೊಳ್ಳುವ ಕಾಂಗ್ರೆಸ್ ಹೈಕಮಾಂಡ್ ಕನ್ನಡಿಗರನ್ನ ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದೆ ಎಂದರೆ ತಪ್ಪಾಗಲಾರದು ಎಂದು ಅಶೋಕ್ ದೂರಿದ್ದಾರೆ.

