ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಘನ ಉಪಸ್ಥಿತಿಯಲ್ಲಿ ನಡೆದ ಎನ್ ಡಿಎ ಸಂಸದರ ಸಭೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.
ನಂತರ ರಾಜ್ಯವನ್ನು ಪ್ರತಿನಿಧಿಸುವ ಸಚಿವರು, ಸಂಸದರೊಂದಿಗೆ ಸಂಸತ್ ಭವನದ ಆವರಣದಲ್ಲಿ ಕುಶಲೋಪರಿ ನಡೆಸಿದರು.
ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಸಂಸದರಾದ ಪಿ.ಸಿ ಮೋಹನ್, ಡಾ.ಸುಧಾಕರ್, ಕೋಟಶ್ರೀನಿವಾಸ್ ಪೂಜಾರಿ ಅವರು ಜತೆಯಲ್ಲಿದ್ದರು.

