ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಗೃಹ ಕಛೇರಿಯಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ರಾಜ್ಯದ ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಸಂಬಂಧ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರುಗಳೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು ಎಂದು ನಿಖಿಲ್ ತಿಳಿಸಿದರು.
ಸಭೆಯಲ್ಲಿ ಪ್ರಮುಖವಾಗಿ ಪಕ್ಷದ ಸಂಘಟನೆ ಹಾಗೂ ಸಾಂಸ್ಥಿಕ ನೇಮಕಗಳಲ್ಲಿ ಗುರುತರ ಬದಲಾವಣೆಗಳು ಆಗಲಿವೆ. ಮುಂದಿನ ದಿನಗಳಲ್ಲಿ ಪಕ್ಷದ ವರ್ಚಸ್ಸು, ಬೆಳವಣಿಗೆ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು ಎಂದು ನಿಖಿಲ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ರವಿಕುಮಾರ್, ಸಮೃದ್ಧಿ ಮಂಜುನಾಥ್, ವೆಂಕಟಶಿವ ರೆಡ್ಡಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ತೂಪಲ್ಲಿ ಚೌಡರೆಡ್ಡಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ, ಮುಖಂಡರಾದ ರಾಮೇಗೌಡ, ನರಸಿಂಹಮೂರ್ತಿ, ಸಿಎಂಆರ್ ಶ್ರೀನಾಥ್, ರಮೇಶ್ ಬಾಬು, ಮುನಿಯಪ್ಪ ಅವರು ಸಭೆಯಲ್ಲಿ ಭಾಗಿಯಾಗಿದ್ದರು.

