ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಾಗ್ದಾಳಿ ನಡೆಸಿದ್ದಾರೆ.
ದ್ವೇಷ ಭಾಷಣ ವಿರೋಧಿಸುವ ವಿಧೇಯಕ ಜಾರಿಗೆ ತರುವ ಸರ್ಕಾರದ ನಿರ್ಧಾರವನ್ನು ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ. ಹೈದರಾಬಾದ್‌ನ ಓವೈಸಿ ಮತ್ತು ದೆಹಲಿಯ ಇಮಾಮ್‌ನಂತಹವರ ಪ್ರಚೋದನಕಾರಿ ಭಾಷಣಗಳಿಂದ ದ್ವೇಷ ಭಾಷಣ ಪ್ರಾರಂಭವಾಗಿದ್ದು, ಇದಕ್ಕೆ ಹಿಂದೂಗಳು ಪ್ರತಿಕ್ರಿಯಿಸುವುದು ಅನಿವಾರ್ಯ ಎಂದು ಯತ್ನಾಳ್ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಸದಾ ಹಿಂದೂ ವಿರೋಧಿ ಕಾನೂನುಗಳನ್ನು ರಚಿಸುತ್ತಿದೆ, ಗೋಹತ್ಯೆ ನಿಷೇಧ ಕಾಯ್ದೆಯ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಟಿಪ್ಪು ಸುಲ್ತಾನ್ ಜಯಂತಿ ಪುನರಾರಂಭ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುವ ಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಕಾಂಗ್ರೆಸ್ ಟಿಪ್ಪುವನ್ನು ಬೆಂಬಲಿಸಿದಾಗಲೆಲ್ಲಾ ನಾಶವಾಗಿದೆ ಎಂದು ಯತ್ನಾಳ್ ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರ ಪುನಃ ನಾಶವಾಗಬೇಕಿದ್ದರೆ ಟಿಪ್ಪು ಜಯಂತಿ ಪ್ರಾರಂಭಿಸಲಿ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅಧಿವೇಶನದಲ್ಲಿ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ಯತ್ನಾಳ್ ಸ್ವಾಗತಿಸಿದರು.

