ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ ಅಭಿಮಾನಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಉಪಮುಖ್ಯಮಂತಿ ಡಿ.ಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕಾಗಿ ಮಂಗಳವಾರ ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇದೇ ವೇಳೆ ಅವರ ಬೆಂಬಲಿಗರು
, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಎಂದು ಘೋಷಣೆ ಕೂಗಿದ್ದಾರೆ.

ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿ ಅವಧಿ ಪೂರೈಸಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದರು. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರ ಘೋಷಣೆ ಕೂಗಿ ಗಮನ ಸಳೆದರು.

- Advertisement - 

ಬೆಳಗಾವಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಸ್ವಾಗತ ಕೋರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಂಎಲ್​ಸಿ ಚನ್ನರಾಜ್, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಎಂದು ಉಲ್ಲೇಖಿಸಿರುವುದು ಗಮನ ಸೆಳೆದಿದೆ. ಎಂಎಲ್​ಸಿ ಚನ್ನರಾಜ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎನ್ನುವುದು ಮುಖ್ಯವಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಬಗ್ಗೆ ವ್ಯಾಪಕ ಚರ್ಚೆ ಶುರುವಾಗುತ್ತಿದ್ದಂತೆಯೇ ಚನ್ನರಾಜ್ ಅದನ್ನು ತಿದ್ದುಪಡಿ ಮಾಡಿದ್ದಾರೆ.

ಬೆಳಗಾವಿಗೆ ಹೊರಡುವ ಮುನ್ನ ಯತೀಂದ್ರ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಬಹಳ ಸಂತೋಷ ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

- Advertisement - 

 

 

Share This Article
error: Content is protected !!
";