ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲುವೆ ಕೊನೆ ಭಾಗಗಳಿಗೆ ನೀರು ತಲುಪಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಜಲಸಂಪನ್ಮೂಲ ಇಲಾಖೆ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಘಟಪ್ರಭಾ ಬಲ ಹಾಗೂ ಎಡ ದಂಡೆ ಕಾಲುವೆಗಳ ಅಭಿವೃದ್ಧಿಗೆ 1722 ಕೋಟಿ ಯೋಜನೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಇದಕ್ಕೆ ಒಪ್ಪಿಗೆ ಸಿಕ್ಕರೆ ಕೇಂದ್ರ ಸರ್ಕಾರದ ಶೇ. 60, ರಾಜ್ಯ ಸರ್ಕಾರದ ಶೇ.40 ವೆಚ್ಚದ ಸಹಭಾಗಿತ್ವದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕಾಲುವೆಗಳಿಗೆ ಅಕ್ರಮ ಪಂಪ್‌ಸೆಟ್‌ಗಳನ್ನು ಹಾಕುವುದರ ವಿರುದ್ಧ ಹೊಸ ಕಾನೂನು ತರಲಾಗಿದೆ. ಇದರ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಕಾಲುವೆ ಕೊನೆ ಭಾಗಗಳಿಗೆ ನೀರು ತಲುಪಲೇ ಬೇಕಿದೆ. ಇದರ ಬಗ್ಗೆ ಎಲ್ಲಾ ಶಾಸಕರು ಒಪ್ಪಿಕೊಂಡರೆ ಅಭಿಯಾನವನ್ನೇ ಪ್ರಾರಂಭ ಮಾಡೋಣ.
ಹಿಡಕಲ್‌ಜಲಾಶಯದ ಬಲ ಹಾಗೂ ಎಡ ದಂಡೆ ಕಾಲುವೆಗಳ ದುರಸ್ತಿ ಹಾಗೂ ಕಾಲುವೆಗಳಿಗೆ ಅಕ್ರಮ ಪಂಪ್‌ಸೆಟ್‌ಅಳವಡಿಕೆ ವಿರುದ್ದದ ಕ್ರಮ ತೆಗೆದುಕೊಳ್ಳುವ ಬಗ್ಗೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಉತ್ತರಿಸಿದರು.

