ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಡಿ. 21 ರಂದು ಚುನಾವಣೆ ನಡೆಯಲ್ಲಿದ್ದು ಡಿ 2 ರಿಂದಪ್ರಾರಂಭವಾದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಡಿ.9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.
ಇಲ್ಲಿಯ ವರೆವಿಗೂ ಓಟ್ಟು 82,ನಾಮಪತ್ರ ಸಲ್ಲಿಕೆಯಾಗಿತ್ತು. ಡಿ 10 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಸಲ್ಲಿಕೆಯಾಗಿದ್ದ ಒಟ್ಟು 82 ನಾಮಪತ್ರಗಳ ಪೈಕಿ 5 ನಾಮಪತ್ರಗಳು ತಿರಸ್ಕೃತವಾಗಿವೆ.
74 ಅಭ್ಯರ್ಥಿಗಳಿಂದ 77 ನಾಮ ಪತ್ರಗಳ ಸಲ್ಲಿಕೆಯಾಗಿ ಕ್ರಮಬದ್ದವಾಗಿವೆ. ಡಿಸೆಂಬರ್ 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಕಣದಲ್ಲಿ ಎಷ್ಟು ಮಂದಿ ಉಳಿಯಲಿದ್ದಾರೆ ಎನ್ನುವುದು ಅಂತಿಮವಾಗಲಿದೆ.

