ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು
Constabale (GD) in Central Armed Police Forces (CAPFs), SSF, Rifleman (GD) in Assam Rifles Examination-2026 ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ, ಇಎಸ್‍ಎಂ ಇತರ ನಿರ್ಧಿಷ್ಟ ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. 2026ರ ಫೆಬ್ರವರಿ-ಏಪ್ರಿಲ್‍ನಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ನಿಖರ ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ https://ssc.gov.in  ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7019755147 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";