ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಷ್ಟ್ರೀಯ ಹೆದ್ದಾರಿ ವಲಯ, ಬೆಂಗಳೂರು ಇಲ್ಲಿ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ಕಳೆದ ತಿಂಗಳು ನಿವೃತ್ತಿಯಾದ ಕೆ.ಜಿ.ಜಗದೀಶ್‌ಗೆ ಡಿ.೧೨ ರ ಇಂದು ಬೆಳಿಗ್ಗೆ ೧೧ ಗಂಟೆಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಯೋಜನಾ, ಕುಡಿಯುವ ನೀರು ಪೂರೈಕೆ ಯೋಜನೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್, ಸಣ್ಣ ನೀರಾವರಿ, ರಾಷ್ಟ್ರೀಯ ಹೆದ್ದಾರಿ ವಿಭಾಗಗಳು, ನಿರ್ಮಿತಿ ಕೇಂದ್ರದ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಅಧೀಕ್ಷಕ ಇಂಜಿನಿಯರ್ ಎಂ.ರಮೇಶ್ ಸಮಾರಂಭ ಉದ್ಗಾಟಿಸಲಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಇಂಜಿನಿಯರ್ ಎಂ.ಗಣೇಶ್, ಕೆ.ಆರ್.ಆರ್.ಡಿ.ಎ. ಮುಖ್ಯ ಕಾರ್ಯಾಚರಣೆ ಅಧಿಕಾರಿ ಎಂ.ಸತೀಶ್, ಕೆ.ಎಸ್.ಎಸ್.ಐ.ಡಿ.ಸಿ. ಅಧೀಕ್ಷಕ ಇಂಜಿನಿಯರ್ ಎಸ್.ಸತೀಶ್‌ಬಾಬು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ,
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಆರ್.ನಾಗರಾಜ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಲ್.ಹನುಮಂತಪ್ಪ, ಯೋಜನಾ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಕೆ.ಮಲ್ಲಿಕಾರ್ಜುನ ಇನ್ನು ಅನೇಕರು ಪಾಲ್ಗೊಳ್ಳುವರೆಂದು ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ ತಿಳಿಸಿದ್ದಾರೆ.

