ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪ್ರತಿಭಾ ಕಾರಂಜಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಾಪೂಜಿ ಪಬ್ಲಿಕ್ ಸ್ಕೂಲ್ ಪಿಳ್ಳೆಕೆರನಹಳ್ಳಿಯ ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿ ರಿಯಾಖಾನಂ, ಜೀವನ್ ಬಿ.ಎ. ಇವರುಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಿದರು.
ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ವಿಶೇಷ ಅಧಿಕಾರಿ ಹನುಮಂತರೆಡ್ಡಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

