ಚಂದ್ರವಳ್ಳಿ ನ್ಯೂಸ್, ರಾಮನಗರ:
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜನವರಿ 6ರಂದು ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಶೇ.99ರಷ್ಟು ಅವಕಾಶ ಇದೆ. ಡಿ.ಕೆ.ಶಿವಕುಮಾರ್ ಒಮ್ಮೆ ಸಿಎಂ ಆಗಬೇಕು ಎಂದು ಇಕ್ಬಾಲ್ ಹೇಳಿದರು.

