ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ನಾಯಕರಿಂದಲೇ ‘ಕೈ‘ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು! ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
“ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲ ನಿಗಮ, ಮಂಡಳಿಗಳ ಸಾಧನೆ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟರ ಹಣ ದೋಚುವುದು ಸರಾಗವಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹಾದೇವಪ್ಪ ಅವರ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ನಾಯಕ ಸದನದಲ್ಲೇ ಸರ್ಕಾರದ ದಲಿತ ವಿರೋಧಿ ನೀತಿಗಳ ಬಗ್ಗೆ ಆರೋಪ ಮಾಡಿರುವುದು ನಾಚಿಕೆಗೇಡು.
ಈ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಬಾರದು. ಇನ್ನೆಂದಿಗೂ ವೇದಿಕೆಗಳಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಸಂವಿಧಾನ, ಸಾಮಾಜಿಕ ನ್ಯಾಯ ಎಂದು ಬೊಗಳೆ ಭಾಷಣ ಬಿಡಬಾರದು ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

