ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿದ್ದ ಮರಗಳನ್ನು ಕಿಡಿಗೇಡಿಗಳು ಕಡಿದಿದ್ದಾರೆ.
ಭಾನುವಾರ ಕಾಲೇಜಿಗೆ ರಜೆ ಇದ್ದ ಕಾರಣ, ಯಾರಿಗೂ ಗೊತ್ತಾಗದಂತೆ ಈ ಕೃತ್ಯ ಎಸಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲರ ಗಮನಕ್ಕೂ ತರದೆ ಖಾಸಗಿ ವ್ಯಕ್ತಿಗಳು ಮರಗಳನ್ನ ಮರಣ ಹೋಮ ಮಾಡಿರುವುದು ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ. ಕಾಲೇಜಿಗೆ ಕಾಂಪೌಂಡ್ ಇಲ್ಲದೆ ಇರುವುದರಿಂದ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಸಹ ದೂರು ದಾಖಲಿಸಲಾಗಿದೆ. ಮರಗಳ ಕಡಿದಿರುವ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

