ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ
ವು  ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ  ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಡೆಸಿದ 50 ದಿನದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮೈಸೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಡಿಸೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಕರಾಮುವಿ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಸುವರು.

ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ ಆರ್.ಎನ್. ಬಿಂದು ಮಣಿ ಅವರು ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಮುಖ್ಯ ಭಾಷಣ ಮಾಡುವರು.

- Advertisement - 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ಉಪಸ್ಥಿತರಿರುವರು.

ಕಳೆದ ಅಕ್ಟೋಬರ್ 29 ರಂದು ಈ ತರಬೇತಿ ಪ್ರಾರಂಭವಾಗಿದ್ದು ಡಿಸೆಂಬರ್ 19 ರಂದು ಮುಕ್ತಾಯವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 172 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";