ಬೈಕ್ ತುಂಬಿದ್ದ ಲಾರಿಗೆ ಬೆಂಕಿ, 40 ಬೈಕ್ ಭಸ್ಮ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಯಮಹಾ ಕಂಪನಿಯ ಬೈಕ್​ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಅವಘಡಕ್ಕೆ ತುತ್ತಾಗಿದ್ದು, 40 ಬೈಕ್​ಗಳು ಸುಟ್ಟು ಭಸ್ಮವಾಗಿರುವ ಘಟನೆ ಬಳ್ಳಾರಿಯ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ಜರುಗಿದೆ.

ಅಗ್ನಿ ಅನಾಹುತದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

- Advertisement - 

ಅದೃಷ್ಟವಶಾತ್, ಲಾರಿ ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡು
ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಲಾರಿಗೆ ಆವರಿಸಿ ಹೊತ್ತಿಕೊಂಡಿದೆ.

ಚೆನೈಯಿಂದ ಬಳ್ಳಾರಿಗೆ ಬೈಕ್‌ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.

- Advertisement - 

ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article
error: Content is protected !!
";