ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಸಂಸ್ಥಾನ ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ನೇಹಾ ಸಿ ಹೆಗಡೆ ದ್ವಿತೀಯ ಬಹುಮಾನ ಪಡೆದು ಜಿಲ್ಲೆಗೆ ಗೌರವ ತಂದಿದ್ದಾರೆ.
ಶ್ರೀ ಭಗವದ್ಗೀತಾ ಅಭಿಯಾನದ ಮೂಲಕ ರಾಜ್ಯದ ಎಲ್ಲ ಕಡೆ 11ನೇ ಅಧ್ಯಾಯದ ಪಾರಾಯಣ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಜರುಗಿದ ರಾಜ್ಯ ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ 350 ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.
ನೇಹಾ ಸಿ. ಹೆಗಡೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವುದು ಜಿಲ್ಲೆಗೆ ಹೆಮ್ಮೆ ಎಂದು ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನದ ಅಧ್ಯಕ್ಷ ದುಗ್ಗಹಟ್ಟಿ ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್ ಋಗ್ವೇದಿ, ಖಜಾಂಚಿ ಎಸ್ ಬಾಲಸುಬ್ರಹ್ಮಣ್ಯ, ಸಂಚಾಲಕ ಕೇಶವಮೂರ್ತಿ, ಸುರೇಶ್ ಅಭಿನಂದಿಸಿದ್ದಾರೆ.

