ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಎಷ್ಟು ಉಪಯೋಗವೋ, ಅಷ್ಟೇ ಅಪಾಯಕಾರಿ. ಇತ್ತಿಚೇಗೆ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಬಳಕೆ ಮಾಡಬೇಕು ಎಂದು ಚಿತ್ರದುರ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜೈರಾಂ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸೈಬರ್ ಕ್ರೈಂ, ಮಾದಕ ವಸ್ತು, ಸಂಚಾರ ಸುರಕ್ಷತೆ, ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
೧೮ ವರ್ಷದೊಳಗಿನ ಮಗುವಿನ ಮೇಲೆ ನಡೆಯುವ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ಮಾಡಿದವರ ವಿರುದ್ದ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾ ಗುವುದು. ಯಾವುದೇ ವ್ಯಕ್ತಿ ಮಕ್ಕಳ ಮೇಲೆ ಇಂತಹ ಸಂಭವನೀಯ ಪ್ರಕರಣದ ಬಗ್ಗೆ ಅನುಮಾನವಿದ್ದಲ್ಲಿ ಇಂತಹ ಅಪರಾಧ ನಡೆದಿರುವುದು ಗಮನಕ್ಕೆ ಬಂದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವುದು ಕಡ್ಡಾಯ. ಇಲ್ಲವೇ ಮಕ್ಕಳ ಸಹಾಯವಾಣಿ ೧೦೯೮ಗೆ ಕರೆ ಮಾಡುವುದು ಎಂದರು.
ಪ್ರಾಂಶುಪಾಲ ಕೆ.ರಂಗಪ್ಪ ಮಾತನಾಡಿ ಇತ್ತಿಚೀನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹದಗೆಡುವುದರ ಜತೆಗೆ ಇಡೀ ಜೀವನವೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವುಗಳಿಂದ ದೂರ ಸರಿದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಎಲ್.ಶಾಂತ್ಕುಮಾರ್, ಈ.ಪ್ರಕಾಶ್ ಬಬ್ಬೂರು, ಈ.ನಾಗೇಂದ್ರಪ್ಪ, ಎಚ್.ಆರ್.ಲೋಕೇಶ್, ಶಾಂತಲಾ, ರೇಷ್ಮಾ, ಜಿ.ಎಸ್.ತಿಪ್ಪೇಸ್ವಾಮಿ, ಮಂಜು ಇತರರಿದ್ದರು.

