ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್
ಬೆಂಗಳೂರು ವತಿಯಿಂದ ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ.

ರೈತ ಮತ್ತು ಜನಪರ, ಜೀವಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ ಅಧ್ಯಕ್ಷ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

ಪ್ರಶಸ್ತಿ ಪ್ರದಾನ-
ಡಿಸೆಂಬರ್-
19ರ ಶುಕ್ರವಾರ ಬೆಳಗ್ಗೆ 11.15ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ, ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ಅಧ್ಯಕ್ಷ ಡಾ.ಎಂ.ಆರ್.ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಸಿಸಿರಾ ಅವರು ತಿಳಿಸಿದ್ದಾರೆ.

- Advertisement - 

Share This Article
error: Content is protected !!
";