ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಧಿಕಾರದಲ್ಲಿರುವ ಆಡಳಿತ ಪಕ್ಷಗಳು ವಿರೋಧ ಪಕ್ಷಗಳ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ತಾರತಮ್ಯ ಮಾಡುವುದು ಸಾಮಾನ್ಯ. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗು
ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಬ್ಬರ ನಡುವಿನ ಬಣ ಬಡಿದಾಟ ಯಾವ ಮಟ್ಟದ ತಾರಕಕ್ಕೇರಿದೆ ಎಂದರೆ ಕಾಂಗ್ರೆಸ್ ಶಾಸಕರ ಕ್ಷೇತಗಳಲ್ಲಿಯೇ ಅನುದಾನ ತಾರತಮ್ಯದ ಬಗ್ಗೆ ಸದನದಲ್ಲಿ ಆರೋಪ ಕೇಳಿ ಬರುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಯಾವುದೇ ರಾಗ ದ್ವೇಷವಿಲ್ಲದೆ, ಇಡೀ ರಾಜ್ಯಕ್ಕೆ ನಿಷ್ಪಕ್ಷಪಾತವಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮದೇ ಪಕ್ಷದ ವಿರೋಧಿ ಬಣದ ಶಾಸಕರಿಗೆ ಈ ರೀತಿ ತಾರತಮ್ಯ ಮಾಡುವುದು ಯಾವ ನ್ಯಾಯ? ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಎಂದು ಅಶೋಕ್ ಹರಿಹಾಯ್ದಿದ್ದಾರೆ.

