ಮಹನೀಯರ ಜಯಂತಿ: ಡಿ.20ರಂದು ಪೂರ್ವಭಾವಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕೇಂದ್ರದಲ್ಲಿ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆ, 2026ರ ಜನವರಿ-01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಂಬಂಧ ಇದೇ ಡಿ.20ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆ ಡಿ.20ರಂದು ಬೆಳಿಗ್ಗೆ 10.30ಕ್ಕೆ ಹಾಗೂ ವಿಶ್ವಮಾನವ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆ ಡಿ.20ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

- Advertisement - 

  ಎಲ್ಲ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";