ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವನಿಧಿ ಸ್ವಯಂ ಘೋಷಣೆ ಮಾಡುವ ಪ್ರಕ್ರಿಯೆ ಡಿಸೆಂಬರ್-2025ರ ತಿಂಗಳಾಂತ್ಯಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ.ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿತ್ತು. ಆದರೆ ಡಿಸೆಂಬರ್ –2025ರ ಮಾಹೆಯಲ್ಲಿ ಸ್ವಯಂ ಘೋಷಣೆ ಮಾಡುವ ಮುನ್ನ ಹಲವು ಹೆಚ್ಚುವರಿ ಮಾಹಿತಿಯನ್ನು ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್‍ನಲ್ಲಿ ಸಲ್ಲಿಸಬೇಕಾಗಿದ್ದು, ಈ ಸಂಬಂಧ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ಯುವನಿಧಿ ಫಲಾನುಭವಿಗಳು ಈ ಯೋಜನೆಯ ಸದ್ಭಳಕೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಚೇರಿ, ಚಿತ್ರದುರ್ಗ-9448460786, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ.

