ವಸತಿ ನಿವೇಶನಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತಿಸಲು ಪ್ರಸ್ತಾವನೆ: ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ
, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ,

ಪರಿಷ್ಕøತ ನಕ್ಷೆಗೆ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

- Advertisement - 

ಇಂದು ವಿಧಾನ ಪರಿಷತ್ ನಲ್ಲಿ ಶಾಸಕ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಪ್ರಸ್ತುತ, ಸದರಿ ಪ್ರಸ್ತಾವನೆಯು ಕರ್ನಾಟಕ ನಗರ & ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯಿದೆ ಅನುಸಾರ ಬಾಗಲಕೋಟೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರಿಶೀಲನಾ ಹಂತದಲ್ಲಿದ್ದು, ನಗರಾಭಿವೃದ್ಧಿ ಪ್ರಾಧಿಕಾರ, ಬಾಗಲಕೋಟೆ ಇವರ ಅನುಮೋದನೆ ನಂತರವೇ ನಿಯಾಮನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

- Advertisement - 
Share This Article
error: Content is protected !!
";