ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಯಲ್ಲದಕೆರೆ ಗ್ರಾಮದ ಶಾಲಾ ಕಾಲೇಜುಗಳಲ್ಲಿ 18ನೇ ದಿನದ ಬೀಟ್ ಚಟುವಟಿಕೆ ಕುರಿತು ಅರಿವು ಮೂಡಿಸಲಾಯಿತು.
ಸಾರ್ವಜನಿಕರು ಸೈಬರ್ ವಂಚಕರಿಂದ ದೂರ ಉಳಿಯಬೇಕು, ಹಣಕಾಸು ವ್ಯವಹಾರ, ಬ್ಯಾಂಕ್ ವಹಿವಾಟು ಮಾಡುವಾಗ ಎಚ್ಚರವಹಿಸಬೇಕು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಾರ್ವಜನಿಕರು ಒತ್ತು ನೀಡಬೇಕು. ಇಂತಹ ವಿಷಯಗಳ ಕುರಿತು ಪ್ರತಿಯೊಬ್ಬರು ಅರಿವು ಹೊಂದಬೇಕು ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಅನುಸೂಯಮ್ಮ ತಿಳಿಸಿದರು.
ಸಾರ್ವಜನಿಕರಲ್ಲಿ ಕಾನೂನು ಪಾಲನೆ ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವುದು, ಪೊಲೀಸ್ ಸಮುದಾಯ ಸಹಭಾಗಿತ್ವ ಬಲಪಡಿಸುವುದರ ಬಗ್ಗೆ ಮಾಹಿತಿ ತಿಳಿಸಿದರು.
ಅಪರಾಧ ತಡೆ ಮಾಸಾಚಾರಣೆಗೆ ಸಹಕರಿಸಿದ ಯಲ್ಲದಕೆರೆ ಜ್ಞಾನ ಜ್ಯೋತಿ ಪ್ರೌಢ ಶಾಲಾ ಶಿಕ್ಷಕರು, ಪ್ರಾಧ್ಯಾಪಕರಿಗೆ, ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಪೊಲೀಸರು ಧನ್ಯವಾದಗಳನ್ನು ಹೇಳಿದರು.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಜಯಪ್ರಕಾಶ್, ಯಲ್ಲದಕೆರೆ ವಿಭಾಗದ ಬೀಟ್ ನೋಡಲ್ ಅಧಿಕಾರಿ ಜಾಫರ್ ಸೇರಿದಂತೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.

