ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ ಕಾರು ಚಾಲಕ ಸಾವು

News Desk

ಚಂದ್ರವಳ್ಳಿ ನ್ಯೂಸ್, ಪಾವಗಡ:
ಭೀಕರ ರಸ್ತೆ ಅಪಘಾತ ಸಂಭವಿಸಿ ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮೃತನನ್ನು ಪಾವಗಡ ತಾಲೂಕಿನ ಐವಾರ್ಲಹಳ್ಳಿ ಗ್ರಾಮದ ರಾಜಶೇಖರ್ ರೆಡ್ಡಿ (40) ಎಂದು ಗುರುತಿಸಲಾಗಿದೆ.
ಆಂಧ್ರಪ್ರದೇಶದ ಪೆನುಕೊಂಡ ಕಡೆಯಿಂದ ಪಾವಗಡದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು
, ಚಾಲಕ ರಾಜಶೇಖರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

- Advertisement - 

ಅಪಘಾತದ ವೇಳೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಮಾಹಿತಿ ಪಡೆದ ಪಾವಗಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದ್ದು, ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 

 

 

 

Share This Article
error: Content is protected !!
";