ಹೊಳಲ್ಕೆರೆಯಲ್ಲಿ ಡಿ.22 ರಂದು ಶಾಮನೂರು ಶ್ರದ್ಧಾಂಜಲಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹಿರಿಯ ರಾಜಕೀಯ ಮುತ್ಸದ್ಧಿ, ಸಜ್ಜನ ಜನನಾಯಕ, ಅಜಾತಶತ್ರು ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಸಭೆಯನ್ನು ಹೊಳಲ್ಕೆರೆಯ ಗಣಪತಿ ಕಲ್ಯಾಣ ಮಂಟಪದಲ್ಲಿ ಡಿ.22 ಸೋಮವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಜಿಲ್ಕಾಧ್ಯಕ್ಷ ಎಂ.ಕೆ.ತಾಜ್.ಪೀರ್, ಮುಖಂಡ ಹನುಮಲಿ ಷಣ್ಮುಖಪ್ಪ ಪಾಲ್ಗೊಳ್ಳುವರು.

- Advertisement - 

ದಾವಣಗೆರೆ ನಗರಸಭೆ ಸದಸ್ಯರು, ಅಧ್ಯಕ್ಷರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವಾಧ್ಯಕ್ಷರು, ಲೋಕಸಭೆಯ ಸದಸ್ಯರು, ಆರು ಬಾರಿ ಶಾಸಕರು, ಸಚಿವರಾಗಿ ಸೇವೆ ಸಲ್ಲಿಸಿದ ಅದಮ್ಯ ಚೇತನ, ದಾವಣಗೆರೆ ಜಿಲ್ಲೆಗೆ ಶಿಕ್ಷಣ ಕಾಶಿ ಗರಿಮೆ ತಂದುಕೊಟ್ಟ,

ನಾಡಿನ ದಾನಶ್ರೇಷ್ಠ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಈ ಸಭೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ ಕೋರಿದ್ದಾರೆ.

- Advertisement - 

 

 

 

Share This Article
error: Content is protected !!
";