ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ 2025-28ನೇ ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ಡಿ.21ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ದಿಕ್ಸೂಚಿ ಭಾಷಣ ಮಾಡುವರು. ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಮಾಣ ವಚನ ಬೋಧನೆ ಮಾಡುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳ್ ಅಧ್ಯಕ್ಷತೆ ವಹಿಸುವರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್, ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರಿಗೆ ಗೌರವ ಸನ್ಮಾನ ಮಾಡಲಾಗುವುದು.
ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಉಪಸ್ಥಿತಿವಹಿಸುವರು.
ಮುಖ್ಯ ಅತಿಥಿಗಳಾಗಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ್ಯ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್,
ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಎಸ್‍ಪಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಭಾಗವಹಿಸುವರು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕ ಪ್ರಕಟಣೆ ತಿಳಿಸಿದೆ.

