ರಾಯಚೂರಿನಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ- ಕೋಡಿಹಳ್ಳಿ ಶಿವಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ವತಿಯಿಂದ 11ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.

ಡಿಸೆಂಬರ್ 20 ಮತ್ತು 21 ರಂದು ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ಅರ್ಜುನ್ ಗೊಳಸಂಗಿ ರವರು ತಿಳಿಸಿರುತ್ತಾರೆ..

- Advertisement - 

ಈ ಸಮ್ಮೇಳನದಲ್ಲಿ  ಜಯದೇವಿ ಗಾಯಕವಾಡ ರವರು ಇಡೀ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಹಾಗೂ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ರವರು ಉದ್ಘಾಟಿಸಲಿದ್ದಾರೆ ಎಂದು ದಲಿತ ಸಾಹಿತ್ಯ ಪರಿಷತ್ ಬೆಂಗಳೂರು ವಿಭಾಗೀಯ ಸಂಯೋಜಕ ಗಣಪತಿ ಗೋ ಛಲವಾದಿ ತಿಳಿಸಿದ್ದಾರೆ.

ಈ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯದ ಕುರಿತು ವಿಚಾರ ಗೋಷ್ಠಿ, ಮಹಿಳಾ ಕಾವ್ಯಯಾನ, ಪುರುಷ ಕಾವ್ಯಯಾನ, ಜನಪದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಅಲ್ಲದೆ ರಾಷ್ಟ್ರೀಯ ಗೌರವ ಪ್ರಶಸ್ತಿ, ರಾಷ್ಟ್ರೀಯ ಯುವ ಪ್ರಶಸ್ತಿ, ರಾಷ್ಟ್ರೀಯ ಪುಸ್ತಕ ಪ್ರಶಸ್ತಿಬಾಲ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ.

- Advertisement - 

ಡಿ: 21 ರಂದು ಸಂಜೆ 04 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ, ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಸಮಾರೋಪ ಭಾಷಣ ಮಾಡಲಿದ್ದಾರೆ. ಹಾಗೂ ಬೀದರ್ ಬೌದ್ಧ ವಿಹಾರದ ವರಜ್ಯೋತಿ ಬಂತೇಜಿ ಇದರ ನೇತೃತ್ವ ವಹಿಸುವರು.

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಕವಿಗಳು, ಸಾಹಿತ್ಯಾಸಕ್ತರು, ಲೇಖಕರು, ಯುವ ಬರಹಗಾರರು, ಕವಯಿತ್ರಿಯರು, ದಲಿತ ಸಂಘಟನೆಗಳ ನಾಯಕರು, ಹೋರಾಟಗಾರರು, ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆ ವತಿಯಿಂದ ಆಸಕ್ತ ಸಾಹಿತಿಗಳು
,

ಕವಿಗಳು, ಯುವ ಬರಹಗಾರು, ಸಾಹಿತ್ಯಾಸಕ್ತರು, ಲೇಖಕರು ಭಾಗವಹಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಂ ಗುರುನಾಥ್, ಚಿತ್ರದುರ್ಗ ಜಿಲ್ಲೆಯ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೋಡಿಹಳ್ಳಿ ಟಿ. ಶಿವಮೂರ್ತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

 

Share This Article
error: Content is protected !!
";