ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಪ್ರತ್ಯೇಕ ಟೌನ್‌ಪ್ಲಾನಿಂಗ್‌ಕಾಲೇಜ್ ಆರಂಭಿಸಲು ನಿರ್ಧಾರ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ನಗರ ಯೋಜನೆ ವಿಷಯದ ಕಾಲೇಜು ಆರಂಭಿಸಲು 100 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ನಗರ ಯೋಜನಾಕಾರರನ್ನು ತಯಾರಿಸಲು ವಿಟಿಯು ಜೊತೆ ಚರ್ಚೆ ಮಾಡಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಇದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಭಾಗಗಳಲ್ಲಿ ನಗರ ಯೋಜನೆ ರೂಪಿಸಲು ನೆರವಾಗುತ್ತದೆ ಎಂದು ಹೇಳಿದರು.

