ಪಲ್ಸ್ ಪೋಲಿಯೋಕ್ಕೆ ಚಾಲನೆ ನೀಡಿದ ಸಿಎಂ 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನವನ್ನು ಮಕ್ಕಳಿಗೆ ಪಲ್ಸ್ ಪೊಲೀಯೊ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು.

ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.‌ಗೃಹ ಕಚೇರಿ ಕೃಷ್ಣಾದಲ್ಲಿ ಮಗುವಿಗೆ ಲಸಿಕೆ ನೀಡುವ ಮೂಲಕ ಅವರು ಚಾಲನೆ ಕೊಟ್ಟರು.

- Advertisement - 

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ‌ಡಿಸೆಂಬರ್ 24ರೊಳಗಾಗಿ ತಪ್ಪದೆ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ನೀವು ಮಗುವಿಗೆ ಹಾಕಿಸುವ ಎರಡು ಹನಿ‌ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸುತ್ತದೆ ಎಂದು ಅವರು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";