ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಸುಳ್ಳು ಮಾಹಿತಿ ನೀಡಿದಾಗಿನಿಂದಲೂ ಗ್ಯಾರಂಟಿ ಯೋಜನೆಯ ಹಣದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ, ಅಕ್ರಮ ನಡೆಯುತ್ತಿರುವ ಅನುಮಾನವಿದ್ದು,
ಈ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಜೆಟ್ ಅನುದಾನ ಹಂಚಿಕೆ ಸೇರಿದಂತೆ ಸಂಬಂಧಪಟ್ಟ ಅಂಕಿ-ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ಕೋರಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿಗಳು ನನ್ನ ಪ್ರಶ್ನೆಗಳಿಗೆ ಪ್ರಾಮಾಣಿಕ ಉತ್ತರ ನೀಡಿ ಕರ್ನಾಟಕದ ಜನತೆಗೆ ಸತ್ಯ ದರ್ಶನ ಮಾಡಿಸುತ್ತಾರೆ ಎಂದು ನಂಬಿದ್ದೇನೆ ಎಂದು ಅಶೋಕ್ ತಿಳಿಸಿದ್ದಾರೆ.

