ಅಂಚೆ ಮೂಲಕ ಕನ್ನಡ ಶಿಕ್ಷಣ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಸಹಯೋಗದಲ್ಲಿ ಕನ್ನಡ ಬಾರದ ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳು, ನಿಗಮ, ಮಂಡಳಿ, ವಿಶ್ವ ವಿದ್ಯಾಲಯ ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು, ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಹಾಗೂ ಸಾರ್ವಜನಿಕರಿಗೆ ಅಂಚೆ ಮೂಲಕ ಹನ್ನೆರಡು ತಿಂಗಳ ಕನ್ನಡ ಶಿಕ್ಷಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಬರುವ ಜನವರಿ 2026 ರಿಂದ ತರಬೇತಿ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವ ವಿಳಾಸಿತ ಲಕೋಟಿಯನ್ನು ಕಳುಹಿಸಿ ಪಡೆದುಕೊಳ್ಳಬಹುದು.

- Advertisement - 

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ವಯೋಮಿತಿ 18 ರಿಂದ 50 ವರ್ಷದೊಳಗಿರುವ ಆಸಕ್ತರು ನೊಂದಣಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಪ್ರಭಾರಿ ಅಧಿಕಾರಿಯವರಿಗೆ ಜನವರಿ 10 ಒಳಗಾಗಿ ಕಳುಹಿಸಿಕೊಡಬೇಕು.

ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250/- ಡಿಮ್ಯಾಂಡ್ ಡ್ರಾಪ್ಟನ್ನು ಕಳುಹಿಸಿ ಕೊಡಬೇಕು. ನೋಂದಣಿ ಮಾಡಿಕೊಂಡವರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

- Advertisement - 

ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರುಹಾಜರಿಯನ್ನು ಅನ್ವಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು.

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರಕಲಿದೆ.

 

 

Share This Article
error: Content is protected !!
";