ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ, ಭಾರತರತ್ನ ದಿ. ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನಾಚರಣೆ ಹಾಗೂ ಮಹಾಲಕ್ಷ್ಮೀ ಲೇಔಟ್ ಮಂಡಲದ ನೂತನ ಅಧ್ಯಕ್ಷರು ಮತ್ತು
ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಕಾರ್ಯಕ್ರಮವು ಗುರುವಾರ ಆಯೋಜಿಸಲಾಗಿದ್ದು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರು ಮತ್ತು ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಮಾಜಿ ಶಾಸಕ ನೆ.ಲಾ. ನರೇಂದ್ರಬಾಬು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

