ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವ ವಿವಾಹಿತೆ ಗಾನವಿ ಮದುವೆಯಾದ ಒಂದೂವರೆ ತಿಂಗಳಲ್ಲೇ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು.
ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ.
ಮದುವೆಗೂ ಮುನ್ನ ವರದಕ್ಷಿಣೆ ಕೇಳಿರಲಿಲ್ಲ, ಆದರೆ ಮದುವೆಯ ನಂತರ ಕಿರುಕುಳ ಶುರುವಾಗಿದೆ. ಗಾನವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ಪ್ರಕರಣ ದಾಖಲಾಗಿದ್ದು ಮೂರು ಮಂದಿ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

