ಆಯುರ್ವೇದ ಎಂದರೆ ರೋಗ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ  ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ. ಇದನ್ನು ಮತ್ತಷ್ಟು ಪ್ರಚುರಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ಆಯುರ್ವೇದ ವಿಶ್ವ ಶೃಂಗಸಭೆಯಲ್ಲಿ ಭಾಗವಹಿಸಲಾಯಿತು ಎಂದು ಅವರು ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಹರಿಹರಪುರ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 

- Advertisement - 

 

 

Share This Article
error: Content is protected !!
";