ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ 2026ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಕರ್ನಾಟಕ ಪ್ರಧಾನ ಪರಿಷತ್ತಿನ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಪದವೀಧರರ ವಿಭಾಗದ ಅಧ್ಯಕ್ಷ ಎ ಎನ್ ನಟರಾಜ್ ಗೌಡ, ಪ್ರಕಾಶ್ ರಾಮಾನಾಯ್ಕ್ ರವರನ್ನು ಚಿತ್ರದುರ್ಗ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ತಾವು ತಮಗೆ ವಹಿಸಲಾಗಿರುವ ಜಿಲ್ಲೆ ವ್ಯಾಪ್ತಿಯ ಕ್ಷೇತ್ರಕ್ಕೆ ಸಂಬಂದಿಸಿದ ಪಕ್ಷದ ಶಾಸಕರು, ಅಧ್ಯಕ್ಷರು ಮತ್ತು ಮುಖಂಡರುಗಳ ಸಹಯೋಗದೊಂದಿಗೆ
ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಲು ಕ್ರಮವಹಿಸಿ, ಪಕ್ಷದ ಗೆಲುವಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ನಿರ್ದೇಶಿಸಲಾಗಿದೆ ಎಂದು ಪ್ರಕಾಶ್ ರಾಮನಾಯ್ಕ್ ತಿಳಿಸಿದ್ದಾರೆ.

