ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಹುದ್ದೆಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತರಿಂದ ಹೊರ ಬರುತ್ತಿವೆ.
ಇದರ ನಡುವೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು, ಡಿಸಿಎಂ ಸರ್‌ಯಾವಾಗ ಸಿಎಂ ಆಗುತ್ತೀರಾ ಎಂದು ಡಿಕೆ ಶಿವಕುಮಾರ್ ಅವರಿಗೆ ನೇರಾನೇರಾ ಪ್ರಶ್ನಿಸುವ ಮೂಲಕ ಗಮನ ಸೆಳೆದಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಅವರೆ ಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ. ಬೆಂಗಳೂರಿನ ಬಸವನಗುಡಿಯ ಅವರೆ ಬೇಳೆ ಮೇಳದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣ ಮುಗಿಸಿ ಕಾರ್ಯಕ್ರಮದಿಂದ ಹೊರ ಹೋಗಲು ಹೆಜ್ಜೆ ಹಾಕುತ್ತಿದ್ದರು.
ಈ ವೇಳೆ ಮಹಿಳೆಯೊಬ್ಬರು ದಿಢೀರ್ ಎಂದು ಡಿಸಿಎಂ ಸರ್ ನೀವು ಸಿಎಂ ಆಗುವುದು ಯಾವಾಗ ಎಂದು ಡಿಕೆ ಶಿವಕುಮಾರ್ ಗೆ ಪ್ರಶ್ನೆ ಕೇಳಿದ್ದಾರೆ. ಮಹಿಳೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಏನೂ ಪ್ರತಿಕ್ರಿಯೆ ನೀಡದೆ ತೆರಳಿದ ಪ್ರಸಂಗವೂ ನಡೆಯಿತು.

