ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ-ಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ.

ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

- Advertisement - 

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ.

ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಸಿಎಂ ತಿಳಿಸಿದರು.

- Advertisement - 

ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

 

Share This Article
error: Content is protected !!
";