ಜನವರಿ 1ರಿಂದ ಹೆಲ್ಮೆಟ್ ಕಡ್ಡಾಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ 12:30ರ ನಂತರ ಸಂಭ್ರಮಾಚರಣೆ  ಅವಕಾಶವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಾಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ.

ಸಂಚಾರ ಸುರಕ್ಷತಾ ಸಪ್ತಾಹ ಪ್ರಯುಕ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದಲ್ಲಿ ನಡೆದ ಹೆಲ್ಮೆಟ್ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಹೆಲ್ಮೆಟ್ ವಿತರಣೆ ಮಾಡಿ ಮಾತನಾಡಿದ ಅವರು ಹೊಸ ವರ್ಷಾಚರಣೆ ವೇಳೆ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲೂ ಡಿ.31ರವರೆಗೆ ಬೈಕ್, ಕಾರು ಸೇರಿದಂತೆ ವಾಹನಗಳ ತಪಾಸಣೆ ಆರಂಭಿಸಲಾಗಿದೆ. ಕುಡಿದು ವಾಹನಗಳ ಚಾಲನೆ ಮಾಡುವವರಿಗೆ ದಂಡ ವಿಧಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

- Advertisement - 

ನಗರದಲ್ಲಿ ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ

. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ಹೊಸವರ್ಷಾಚರಣೆಗೆ ಮಾತ್ರ ಸೀಮಿತವಾಗದೆ ನಿರಂತರವಾಗಿ ನಡೆಯಲಿದೆ ಬೈಕ್‌ಸೇರಿದಂತೆ ಇತರೆ ವಾಹನ ಚಾಲಕರು. ಅಗತ್ಯದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದರು.

- Advertisement - 

 ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಉಪವಿಭಾಗದ ಎಲ್ಲಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗಳು, ಸಿಬ್ಬಂದಿಗಳು ಹಾಜರಿದ್ದರು.

 

Share This Article
error: Content is protected !!
";