ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ನಡೆಯುತ್ತಿರುವ ಕೆಂಪೇಗೌಡ ಉತ್ಸವದ ಅಂಗವಾಗಿ ಮಾಗಡಿ ಕೋಟೆ
ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪತ್ನಿ ಸಮೇತರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು.
ಈ ವೈಭವದ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕ್ಷಣಗಳು ನಿಜಕ್ಕೂ ಅವಿಸ್ಮರಣೀಯ ಎಂದು ಡಿಸಿಎಂ ತಿಳಿಸಿದರು.

