ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ಧಿಯ ಅಂಗವಾಗಿ ಇಡೀ ದೇಶಾದ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಅಟಲ್ ಅವರು ಈಗ ಭೌತಿಕವಾಗಿ ಇಲ್ಲದಿದ್ದರೂ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಲ್ಲೂ ಕೂಡ ಪ್ರೇರಣಾಸ್ವರೂಪರಾಗಿದ್ದಾರೆ. ಪಕ್ಷದ ಕಾಪು ಮಂಡಲದ ವತಿಯಿಂದ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಅವರ ನೇತೃತ್ವದಲ್ಲಿ ಕಾಪು ಕಡಲ ತೀರದಲ್ಲಿ, ಅಟಲ್ ಜೀ ಜನ್ಮ ಶತಾಬ್ದಿ ಹಾಗೂ ಡಾ ವಿ.ಎಸ್.ಆಚಾರ್ಯರ ಸಂಸ್ಮರಣಾರ್ಥ ಆಯೋಜಿಸಲಾಗಿದ್ದ “ಕಾಪು ಕಡಲಪರ್ಬ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಾಯಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರುಗಳಾದ ಹರೀಶ್ ಪೂಂಜಾ, ಸಿಮೆಂಟ್ ಮಂಜು, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಂಡಲಾಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರುಗಳಾದ ಪಿ.ಮದ್ವಾರಾಜ್, ಲಾಲಾಜಿ ಆರ್ ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,
ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಪುರಸಭಾ ಸದಸ್ಯ ನಿತಿನ್, ಸೇರಿದಂತೆ ಹಲವಾರು ಗಣ್ಯರು, ಅತಿಥಿಗಳು, ಪ್ರಮುಖರು, ಮುಖಂಡರು, ಪಕ್ಷದ ಪದಾಧಿಕಾರಿಗಳು, ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕ ಬಂಧುಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

