ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ಜ.09 ರವರಗೆ ವಿಸ್ತರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಮಾನ್ಯ
, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 09 ರವರೆಗೆ ವಿಸ್ತರಿಸಲಾಗಿದೆ.  ಅರ್ಜಿಯನ್ನು ಆನ್‍ಲೈನ್ ಮೂಲಕ ಮಾತ್ರ ಸಲ್ಲಿಸುವಂತೆ ತಿಳಿಸಲಾಗಿದೆ.

ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ

- Advertisement - 

ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು  sevasindhu.karnataka.gov.in ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು,

ಅರ್ಜಿ ಸಲ್ಲಿಕೆಗೆ ಡಿ. 30 ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿತ್ತು.  ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು 10 ದಿನಗಳ ಕಾಲ ವಿಸ್ತರಿಸಿದ್ದು, ಜನವರಿ 09 ರವರಗೆ ಅರ್ಜಿ ಸಲ್ಲಿಸಲು ಕಾಲಾವಾಕಾಶ ನೀಡಲಾಗಿದೆ.

- Advertisement - 

 ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";