ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ” ಎಂದು ತಿಪ್ಪೇಸಾರುವ ಕೇರಳಿಗರ ಚೇಟಾ ಸಿಎಂ ಸಿದ್ದರಾಮಯ್ಯ ಅವರೇ, ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಜೆಡಿಎಸ್ ಧಿಕ್ಕಾರವಿರಲಿ ಎಂದಿದೆ.
ಹೈಕಮಾಂಡ್ ಆರ್ಡರ್‌ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ ?
ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು ಸರ್ಕಾರಕ್ಕೆ ಇಲ್ಲವಾಗಿದೆ.
ವೋಟ್‌ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ಪಕ್ಷ, ವಸತಿ ಸಚಿವ ಜಮೀರ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

