ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಲ್ಲಘಟ್ಟ ಹಾಗೂ ಭೀಮನಕುಪ್ಪೆಯ ಕೆಂಪೇಗೌಡ ಬಡಾವಣೆ ಸಮೀಪ ಸ್ಕೈಡೆಕ್ ನಿರ್ಮಾಣದ ಸ್ಥಳ ಪರಿಶೀಲನೆ ಹಾಗೂ ರಸ್ತೆ ಕಾಮಗಾರಿ ಪರಿಶೀಲನೆಯನ್ನು ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರು ಸ್ಕೈಡೆಕ್ ನಗರದ ಪ್ರಮುಖ ಆಕರ್ಷಣೆ ಆಗಲಿದ್ದು, ಬೆಂಗಳೂರಿನ ವಿಹಂಗಮ ನೋಟವನ್ನು ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ ಎಂದು ಡಿಸಿಎಂ ಶಿವಕುಮಾರ್ ಅಭಿಪ್ರಾಯಪಟ್ಟರು.

