ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅತೀ ಹೆಚ್ಚು ಪ್ಲಾಸ್ಟಿಕ್ ಬಳಸುವ ಬದಲಾಗಿ ಬಟ್ಟೆಯಿಂದ ತಯಾರಿಸಿದ ಕೈಚೀಲ ಗಳನ್ನು ಬಳಸುವುದರಿಂದ ವನ್ಯ ಜೀವಿಗಳ ಸಂರಕ್ಷಣೆ ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಬಹುದು ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಅವರು ಹಿರಿಯೂರು ನಗರಸಭೆಯಿಂದ ವಿತರಿಸಲು ತಯಾರಿಸಿದ ಬಟ್ಟೆಯ ಕೈಚೀಲವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಾರಕವಾದ ಕ್ಯಾನ್ಸರ್ ರೋಗಗಳು ಮನುಷ್ಯರಲ್ಲಿ ಭಾದಿಸುತ್ತಿದೆ. ಹಣ್ಣು ತರಕಾರಿ ಊಟದ ಪೊಟ್ಟಣ್ಣಗಳನ್ನು ಕಟ್ಟಲು ಪ್ಲಾಸ್ಟಿಕ್ ಪೇಪರ್ ಗಳ ಬಳಕೆಯನ್ನು ಮಾಡಬಾರದು ಪ್ಲಾಸ್ಟಿಕ್ ಪೇಪರ್ ವಿಷಕಾರಿ ಅಂಶಗಳನ್ನು ಒಳಗೊಂಡಿದ್ದು ಇದರ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ದೊಡ್ಡ ಮಾರಕವಾಗುವುದು ಎಂದರು.
ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಮಾತನಾಡಿ ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸುವ ವ್ಯವಸ್ಥೆ ಮಾಡಲಾಗುವುದು ಬಳಸಿದವರಿಗೆ ದಂಡ ವಿಧಿಸುವುದರ ಮೂಲಕ ಎಚ್ಚರಿಕೆ ನೀಡಲಾಗುವುದು ಎಂದರು.
ಪೌರಾಯುಕ್ತ ಎ.ವಾಸೀಂ ಮಾತನಾಡಿ ನಿಷೇದಿತ ಪ್ಲಾಸ್ಟಿಕ್ ಬಳಕೆ ನಗರದ ಸ್ವಚ್ಛತೆಗೆ ಪ್ಲಾಸ್ಟಿಕ್ ಬಳಕೆ ನಿಷೇದ ಮಾಡುವುದರಿಂದ ಸಾರ್ವಜನಿಕರ ಆರೋಗ್ಯ ದೃಷ್ಟಿ ಉತ್ತಮವಾಗಿರುತ್ತದೆ ಪ್ಲಾಸ್ಟಿಕ್ ಬಳಕೆಯಿಂದ ಹಲವಾರು ರೋಗಗಳು ಹರಡುವುದರಿಂದ ಸಾರ್ವಜನಿಕರ ಎಚ್ಚೆತ್ತುಕೊಂಡು ಬಟ್ಟೆ ಬ್ಯಾಗುಗಳನ್ನು ಬಳಸುವುದರಿಂದ ನೀವು ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಪ್ಲಾಸ್ಟಿಕ್ ಮುಕ್ತ ನಗರವನ್ನ ಮಾಡಲು ಸಾರ್ವಜನಿಕರು ಸಹಕರಿಸಬೇಕು ಪ್ಲಾಸ್ಟಿಕ್ ನಿಷೇಧ ಅಂತ್ಯವಾಗಬೇಕೆಂದು ತಿಳಿಸಿದರು ಎಂದರು.
ತಾಲ್ಲೂಕು ದಂಢಾಧಿಕಾರಿ ಸಿದ್ದೇಶ್ ಮಾತನಾಡಿ ಸರ್ಕಾರಿ ಕಛೇರಿಗಳಲ್ಲಿಯೂ ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಛೇರಿ ಸಿಬ್ಬಂದಿ ವರ್ಗದವರು ಪಾಲಿಸಬೇಕು ಎಂದರು.

“ಹಿರಿಯೂರು ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಐ.ಇ.ಸಿ ಅನುದಾನದಡಿ ಬಟ್ಟೆ ಬ್ಯಾಗ್ ಗಳನ್ನು ತಯಾರಿಮಾಡಿಸಿ ವಿತರಣೆ ಮಾಡುವ ನಗರಸಭೆಯ ಧ್ಯೇಯ ಉದ್ದೇಶವಾಗಿರುತ್ತದೆ”.
ಎ.ವಾಸೀಂ, ಪೌರಾಯುಕ್ತರು, ನಗರಸಭೆ, ಹಿರಿಯೂರು.
ಎಡಿಸಿ ಕುಮಾರಸ್ವಾಮಿ, ನಗರಸಭೆ ವ್ಯವಸ್ಥಾಪಕಿ ಬಿ.ಆರ್.ಮಂಜುಳ, ಆರೋಗ್ಯ ನಿರೀಕ್ಷಕಿ ಸಂಧ್ಯಾ, ಕಂದಾಯ ನಿರೀಕ್ಷಕ ಜಬೀವುಲ್ಲಾ, ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

